ಮುಂದಿನ 9 ದಿನ ಕರ್ನಾಟಕದಲ್ಲಿ ವರುಣನ ಆರ್ಭಟ, ಎಚ್ಚರಿಕೆ! KSNDMC ತುರ್ತು ಪ್ರಕಟಣೆ.
ವರದಿಗಾರರು (Reporter)
Hemanth Rajashekar02:22 AM IST

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ಚುರುಕುಗೊಳ್ಳುತ್ತಿದ್ದು, ಜೂನ್ 1 ರಿಂದ ಜೂನ್ 9, 2026 ರವರೆಗೆ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತನ್ನ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಪ್ರಬಲ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿಗೆ ಹೈ ಅಲರ್ಟ್
KSNDMC ಬಿಡುಗಡೆ ಮಾಡಿರುವ ಸಂಪೂರ್ಣ ವಿವರಗಳ ಪ್ರಕಾರ, ಜೂನ್ 3 ರಿಂದ ಕರಾವಳಿ ತೀರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ವಿಶೇಷವಾಗಿ ಜೂನ್ 6 ರಿಂದ ಜೂನ್ 9 ರ ಅವಧಿಯಲ್ಲಿ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಮಲೆನಾಡು ಭಾಗದಲ್ಲೂ ಸಹ ಜೂನ್ 7 ರಿಂದ ಜೂನ್ 9 ರ ನಡುವೆ ಭಾರಿಯಿಂದ ಅತಿ ಭಾರಿ ಮಳೆಯಾಗಲಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ಗುಡುಗು-ಬಿರುಗಾಳಿಯ ಅಬ್ಬರ
ಉತ್ತರ ಒಳನಾಡಿನ ಭಾಗಗಳಲ್ಲಿ ಆರಂಭಿಕ ದಿನಗಳಲ್ಲಿ ಮಳೆಯ ಆರ್ಭಟ ಜೋರಿರಲಿದೆ. ಜೂನ್ 1 ರಿಂದ ಜೂನ್ 5 ರವರೆಗೆ ಈ ಭಾಗದ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.
ಮುಂದಿನ 9 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದ ಏರುಪೇರು ಹೀಗಿರಲಿದೆ:

ಮುನ್ನೆಚ್ಚರಿಕೆ: ಗುಡುಗು ಮತ್ತು ಮಿಂಚಿನ ಸಮಯದಲ್ಲಿ ಸಾರ್ವಜನಿಕರು ಹಾಗೂ ರೈತರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರವು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಇತ್ತೀಚಿನ ಲೇಖನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:
ಸುಮಲತಾಗೆ ಸಿಗುತ್ತಾ ದೆಹಲಿ ಆಫರ್? ದೋಸ್ತಿಗಳ ‘ರಾಜ್ಯಸಭೆ’ ಕುಸ್ತಿಗೆ ಹೈಕಮಾಂಡ್ ಬಿಗ್ ಪ್ಲಾನ್!