ಸಿಲಿಕಾನ್ ಸಿಟಿಗೆ ಹೊಸ ಕಳೆ: ಕೆಂಪೇಗೌಡ ಜಯಂತಿ ದಿನವೇ ‘ಎಸ್‌ಎಂ ಕೃಷ್ಣ ದಶಪಥ ರಸ್ತೆ’ ಜನಾರ್ಪಣೆ.
ವರದಿಗಾರರು (Reporter)
Hemanth Rajashekar12:47 AM IST

ಬೆಂಗಳೂರು: ರಾಜಧಾನಿ ಬೆಂಗಳೂರಿನ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಮಹೂರ್ತದಲ್ಲೇ, ಬಹುನಿರೀಕ್ಷಿತ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ‘ಎಸ್.ಎಂ. ಕೃಷ್ಣ ದಶಪಥ (10-ಲೇನ್) ರಸ್ತೆ’ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಂಡಿದೆ. ನಾಡಿನ ಪ್ರಮುಖ ಪರಮಪೂಜ್ಯ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಭವ್ಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ದೀಪ ಬೆಳಗುವ ಮೂಲಕ ಈ ಮಹತ್ವಾಕಾಂಕ್ಷಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು.
ಮಠಾಧೀಶರ ದಿವ್ಯ ಉಪಸ್ಥಿತಿ ಮತ್ತು ಆಶೀರ್ವಚನ
ಈ ಐತಿಹಾಸಿಕ ಸಭಾ ಕಾರ್ಯಕ್ರಮವು ನಾಡಿನ ಪ್ರಮುಖ ಧಾರ್ಮಿಕ ಮುಖಂಡರ ದಿವ್ಯ ಉಪಸ್ಥಿತಿಗೆ ಸಾಕ್ಷಿಯಾಯಿತು.
- ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ
- ಶ್ರೀ ಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು
- ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಂಜಾವಧೂತ ಮಹಾಸ್ವಾಮೀಜಿ
- ವಿಶ್ವ ಒಕ್ಕಲಿಗರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ನಿಶ್ಚಲಾನಂದ ಮಹಾಸ್ವಾಮಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಮತ್ತು ನೂತನ ಹೆದ್ದಾರಿ ಯೋಜನೆಗೆ ತಮ್ಮ ಆಶೀರ್ವಾದದ ನುಡಿಗಳನ್ನು ಹಂಚಿಕೊಂಡರು.

ಗಣ್ಯಾತಿಗಣ್ಯರ ದಂಡು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಮ್ಮಿಕೊಂಡಿದ್ದ ಈ ಅದ್ಧೂರಿ ಸಮಾರಂಭದಲ್ಲಿ ಸರ್ಕಾರದ ಪ್ರಮುಖ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ, ಬಿಡಿಎ ಅಧ್ಯಕ್ಷರಾದ ಶ್ರೀ ಎನ್.ಎ. ಹ್ಯಾರಿಸ್, ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಶ್ರೀ ಕೆ.ಜೆ. ಜಾರ್ಜ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಹಾಗೂ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಕಾರ್ಯಕ್ರಮದ ಗೌರವಾನ್ವಿತ ಉಪಸ್ಥಿತಿ ವಹಿಸಿದ್ದರು.
ಇವರೊಂದಿಗೆ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಶ್ರೀ ಟಿ.ಬಿ. ಜಯಚಂದ್ರ, ಶಾಸಕರುಗಳಾದ ಶ್ರೀ ಹೆಚ್.ಸಿ. ಬಾಲಕೃಷ್ಣ, ಶ್ರೀ ಎಸ್.ಟಿ. ಸೋಮಶೇಖರ್, ವಿಧಾನಪರಿಷತ್ ಸದಸ್ಯರಾದ ಶ್ರೀ ಪುಟ್ಟಣ್ಣ ಮತ್ತು ಕೆ. ಗೋವಿಂದರಾಜ ಅವರು ಭಾಗಿಯಾಗಿದ್ದರು. ವಿಶೇಷವಾಗಿ, ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ಎಂ. ಕೃಷ್ಣ ಅವರ ಧರ್ಮಪತ್ನಿ ಶ್ರೀಮತಿ ಪ್ರೇಮಾ ಕೃಷ್ಣ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಗೌರವಾನ್ವಿತ ಕಳೆಯನ್ನು ತಂದರು. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಸಾರ್ವಜನಿಕರು ಮಾಧ್ಯಮ ಮಿತ್ರರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.
ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ಈ ದಶಪಥ ರಸ್ತೆಯು ಕೇವಲ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದಲ್ಲದೆ, ಭವಿಷ್ಯದ ಆರ್ಥಿಕ ಕಾರಿಡಾರ್ ಆಗಿ ಹೊರಹೊಮ್ಮಲಿದೆ ಎಂದು ಕಾರ್ಯಕ್ರಮದಲ್ಲಿ ಗಣ್ಯರು ಅಭಿಪ್ರಾಯಪಟ್ಟರು.
ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಎಸ್‌ಎಂ ಕೃಷ್ಣ ರಸ್ತೆ
ಬೆಂಗಳೂರಿನ ಪಶ್ಚಿಮ ಮತ್ತು ದಕ್ಷಿಣ ಭಾಗಗಳನ್ನು ಸಂಪರ್ಕಿಸುವ ಈ ಮೇಜರ್ ಆರ್ಟೀರಿಯಲ್ ರಸ್ತೆಗೆ ಬೆಂಗಳೂರನ್ನು ಜಾಗತಿಕ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ದೂರದರ್ಶಿ ನಾಯಕ ಎಸ್.ಎಂ. ಕೃಷ್ಣ ಅವರ ಹೆಸರನ್ನು ಇಡಲಾಗಿದೆ. ಸಿಗ್ನಲ್ ಮುಕ್ತ ಹಾಗೂ ಟೋಲ್ ಮುಕ್ತವಾಗಿರುವ ಈ ರಸ್ತೆಯು ಐಟಿ ನಗರಿಯ ಪ್ರಮುಖ ಉಪನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸಲಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆ (NPKL) ವ್ಯಾಪ್ತಿಯಲ್ಲಿ ಬರುವ ಈ ರಸ್ತೆಯು ಸಾರ್ವಜನಿಕರಿಗೆ ದೊಡ್ಡ ಮಟ್ಟದ ನೆಮ್ಮದಿ ತರಲಿದೆ.
ಇತ್ತೀಚಿನ ಲೇಖನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: